ADVERTISEMENT

ಬೆಳ್ತಂಗಡಿ: ಶಾಸಕ ಪೂಂಜ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2024, 5:51 IST
Last Updated 5 ಆಗಸ್ಟ್ 2024, 5:51 IST
ಬೆಳ್ತಂಗಡಿ ಮಿನಿ ವಿಧಾನಸೌಧದ ಬಳಿ ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು
ಬೆಳ್ತಂಗಡಿ ಮಿನಿ ವಿಧಾನಸೌಧದ ಬಳಿ ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು   

ಬೆಳ್ತಂಗಡಿ: ‘ಶಾಸಕ ಹರೀಶ್ ಪೂಂಜ ಅವರು 15 ದಿನಗಳಿಂದ ಕಾಣೆಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ’ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಇಂಟಕ್ ಅಧ್ಯಕ್ಷ ನವೀನ್ ಗೌಡ ಸವಣಾಲು ಮಾತನಾಡಿ, ‘ಮಳೆಯಿಂದಾಗಿ ಜನರು ಸಂಕಷ್ಟದಲ್ಲಿದ್ದರೂ ಶಾಸಕ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರ ಅವರು 30 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಭದ್ರವಾಗಿದ್ದು, ಶಾಸಕ ಹರೀಶ್ ಪೂಂಜ 3 ವರ್ಷಗಳ ಹಿಂದೆ ನಡೆಸಿದ ಕಾಮಗಾರಿ ಮಳೆಯ ನೀರಿಗೆ ಕೊಚ್ಚಿ ಹೋಗಿದೆ’ ಎಂದು ಟೀಕಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಸುದರ್ಶನ ಶೆಟ್ಟಿ ಆರಂಬೋಡಿ, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ, ಕಳಿಯ ಗ್ರಾಮ ಪಂಚಾಯಿತಿ ಸದಸ್ಯ ಕರೀಂ ಗೇರುಕಟ್ಟೆ, ಕಾಂಗ್ರೆಸ್ ಮುಖಂಡರಾದ ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಹನೀಫ್‌ ಉಜಿರೆ ಮಾತನಾಡಿದರು.

ADVERTISEMENT

ಮಹಿಳಾ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷೆ ವಂದನಾ ಭಂಡಾರಿ, ತಾಲ್ಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಸವಿತಾ ಕೊರಗ, ಎಸ್.ಟಿ ಘಟಕದ ಅಧ್ಯಕ್ಷ ಜಯಾನಂದ ಪಿಲಿಕಲ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗೋಪಿನಾಥ್ ನಾಯಕ್, ಮುಖಂಡರಾದ ರವೀಂದ್ರ ಬಿ.ಅಮಿನ್, ಸದಾನಂದ ನಾಲ್ಕೂರು, ಪ್ರಜ್ವಲ್ ಜೈನ್ ಅಳದಂಗಡಿ, ಅಶ್ವಿನ್ ಕುಮಾರ್ ಬಳೆಂಜ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.