ADVERTISEMENT

ಬೆಳ್ಳಾರೆ‌: ಬಿಜೆಪಿ ಮುಖಂಡನ ಕೊಲೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 5:18 IST
Last Updated 27 ಜುಲೈ 2022, 5:18 IST
   

ಸುಳ್ಯ: ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು (32) ಎಂಬವರನ್ನು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದುಪರಾರಿ ಆಗಿದೆ. ಗಂಭೀರ ಗಾಯಗೊಂಡಿದ್ದಅವರುಆಸ್ಪತ್ರೆಗೆ ಸಾಗಿಸುವ ಸಂದರ್ಭ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರವೀಣ್ ಅವರು, ಬೆಳ್ಳಾರೆಯಲ್ಲಿಅಕ್ಷಯ ಕೋಳಿ ಅಂಗಡಿಯನ್ನು ನಡೆಸುತ್ತಿದ್ದರು. ಬಜರಂಗದಳವೂ ಸೇರಿದಂತೆ ಸಂಘ ಪರಿವಾರದ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.