ಮಂಗಳೂರು: ಇಲ್ಲಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗುರುವಾರ ನಡೆದ ರಕ್ತದಾನ ಶಿಬಿರದಲ್ಲಿ ಸುಮಾರು 100 ಜನರು ರಕ್ತದಾನ ಮಾಡಿದರು.
ಅಖಿಲ ಕರ್ನಾಟಕ ರಾಜ್ಯ ಸಮುದಾಯದ ಆರೋಗ್ಯ ಎನ್‌ಎಚ್‌ಎಂ ಗುತ್ತಿಗೆ ನೌಕರರ ಸಂಘದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸೊಸೈಟಿ, ದಕ್ಷಿಣ ಕನ್ನಡ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ಸಹಯೋಗದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಉದ್ಘಾಟಿಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಗದೀಶ, ಆಸ್ಪತ್ರೆಯಲ್ಲಿ ರಕ್ತದ ಅವಶ್ಯಕತೆ ಎಷ್ಟಿದೆ ಎಂಬುದನ್ನು ಅಂಕಿ–ಅಂಶಗಳ ಮೂಲಕ ತಿಳಿಸಿದರು. ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಶಾಂತಾರಾಮ್ ಶೆಟ್ಟಿ ಹರ್ಷ ವ್ಯಕ್ತಪಡಿಸಿದರು.
ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ ಹಳ್ಳಿ, ಶಿಬಿರ ಹಮ್ಮಿಕೊಂಡ ಉದ್ದೇಶ ತಿಳಿಸಿದರು. ಸಮುದಾಯ ಆರೋಗ್ಯ ಅಧಿಕಾರಿಗಳು, ಲೇಡಿಗೋಷನ್ ಆಸ್ಪತ್ರೆ ಸಿಬ್ಬಂದಿ ರಕ್ತದಾನ ಮಾಡಿದರು.
ಶಿಬಿರದಲ್ಲಿ ಆಸ್ಪತ್ರೆಯ ಎನ್‌ಐಸಿಯು ವಿಭಾಗದ ಮುಖ್ಯಸ್ಥ ಡಾ. ಬಾಲಕೃಷ್ಣ, ಶುಶ್ರೂಷಕರ ಅಧೀಕ್ಷಕ ತ್ರೆಸಿಯಮ್ಮ, ಸಹ ಆಡಳಿತ ಅಧಿಕಾರಿ ರೋಹಿತಾಕ್ಷ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.