ADVERTISEMENT

ಶಿರಾಡಿ: ಬಸ್ ಢಿಕ್ಕಿ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 4:51 IST
Last Updated 26 ನವೆಂಬರ್ 2024, 4:51 IST

ಉಪ್ಪಿನಂಗಡಿ: ಶಿರಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ಕೆ.ಎಸ್.ಆರ್.ಟಿ.ಸಿ. ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಶಿರಾಡಿ ಗ್ರಾಮದ ಪದಂಬಳ ನಿವಾಸಿ ಕೆ.ಎಂ.ಮತ್ತಾಯಿ ಯಾನೆ ಮತ್ತಚ್ಚನ್ (70) ಮೃತರು. ಪಡಿತರ ತರಲು ಅವರು ಮನೆಯಿಂದ ಶಿರಾಡಿ ಪೇಟೆಗೆ ತೆರಳಿದ್ದರು. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಧರ್ಮಸ್ಥಳದಿಂದ-ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಡಿಕ್ಕಿ ಹೊಡೆದಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಂಬುಲೆನ್ಸ್‌ನಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್  ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ADVERTISEMENT

ಎರಡನೇ ಆಘಾತ: ಕೆ.ಎಂ. ಮತ್ತಾಯಿ ಅವರ ಹಿರಿಯ ಮಗ ರೆಜಿ ಅವರು ಎರಡು ತಿಂಗಳ ಹಿಂದೆ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಉದನೆ ಸಮೀಪದ ನೇಲಡ್ಕದಲ್ಲಿ ಕಾರು ಡಿಕ್ಕಿ ಹೊಡೆದಿತ್ತು. ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.  ಇ ನೋವಿನಲ್ಲಿರುವಾಗಲೇ ಬಸ್ ಅಪಘಾತದಲ್ಲಿ ಮತ್ತಾಯಿ ಮೃತಪಟ್ಟಿದ್ದು ಕುಟುಂಬಕ್ಕೆ ಆಘಾತವನ್ನುಂಟುಮಾಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.