ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಅತಿಥಿಯಾಗಿಕಲ್ಕಡ್ಕ ಪ್ರಭಾಕರ ಭಟ್ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್‌ಐ) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.
'ಪ್ರಭಾಕರ ಭಟ್ ಗೋ ಬ್ಯಾಕ್ ' ಎಂದು ಘೋಷಣೆ ಕೂಗಿದರು.ಪ್ರತಿಭಟನೆಯ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಲಾಯಿತು.
'ದ್ವೇಷ ಭಾಷಣವನ್ನು ನಿರಂತರವಾಗಿ ಮಾಡುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಆಹ್ವಾನಿಸಿರುವುದು ಖಂಡನೀಯ. ವಿದ್ಯಾಕೇಂದ್ರವನ್ನು ವಿವಿ ಅಧಿಕಾರಿಗಳು ಸಂಘದ ಕೇಂದ್ರವನ್ನಾಗಿ ಮಾಡಲು ಹೊರಟಿದ್ದಾರೆ. ವಿದ್ಯೆ ನೀಡಬೇಕಾದ ಕೇಂದ್ರದಲ್ಲಿ ಕೋಮು ಸಾಮರಸ್ಯ ಕದಡುವ ಕಾರ್ಯ ಮಾಡುತ್ತಿದ್ದಾರೆ' ಎಂದು ಪ್ರತಿಭಟನೆನಿರತ ವಿದ್ಯಾರ್ಥಿಗಳು ಆರೋಪಿಸಿದರು.
ವಿದ್ಯಾರ್ಥಿ ಪರಿಷತ್ ಉದ್ಘಾಟನೆ: ಇನ್ನೊಂದು ಪ್ರವೇಶ ದ್ವಾರದಿಂದ ಬಂದ ಕಲ್ಲಡ್ಕ ಪ್ರಭಾಕರ ಭಟ್ ಅವರು ವಿವಿಯ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ಘಟಕವನ್ನು ಉದ್ಘಾಟಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮತ್ತು ವಿವಿ ಪ್ರಮುಖರು ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.