ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣೆಯ ಬಳಿ ಶುಕ್ರವಾರ ಮಾರುತಿ ರಿಟ್ಜ್ ಕಾರೊಂದು ಬೆಂಕಿಹೊತ್ತಿ ಉರಿದಿದೆ. ಚಾಲಕ ಚಾಲನೆ ಮಾಡುತ್ತಿದ್ದಾಗಲೇ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ತಲಪಾಡಿಯ ನಿವಾಸಿ ಅಂಕಿತ್ ಎಂಬುವರಿಗೆ ಸೇರಿದ ಕಾರು ಇದಾಗಿದೆ. ಕಾರು ರಸ್ತೆಯ ಮೇಲೆ ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರನ್ನು ನಿಲ್ಲಿಸಿದ ಚಾಲಕ ಕೆಳಗೆ ಇಳಿದಿದ್ದಾರೆ, ಅಷ್ಟರಲ್ಲೇ ಬೆಂಕಿ ಜ್ವಾಲೆಯಾಗಿ ಉರಿದಿದೆ. ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ತಾಂತ್ರಿಕ ದೋಷದಿಂದಾಗಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.