ADVERTISEMENT

ತುಳು ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಚೌಟ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 4:34 IST
Last Updated 25 ಜೂನ್ 2024, 4:34 IST
ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಮಿಸಿದರು
ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ ಬಳಿಕ ನಮಿಸಿದರು   

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.   

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಮಾತೆರೆಗ್ಲಾ ಸೊಲ್ಮೆಲು’ (ಎಲ್ಲರಿಗೂ ನಮಸ್ಕಾರ) ಎಂದು ತುಳುವಿನಲ್ಲಿ ಧನ್ಯವಾದ ಸಲ್ಲಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಾರ್ಯಾಲಯಕ್ಕೆ ಭೇಟಿ ನೀಡಿ, ಶ್ಯಾಮಾಪ್ರಸಾದ್ ಮುಖರ್ಜಿ ಮತ್ತು ದೀನದಯಾಳ್ ಉಪಾಧ್ಯಾಯ ಅವರ ಪುತ್ಥಳಿಗೆ ನಮಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.