ADVERTISEMENT

ಬಜಪೆ: ಸ್ವಚ್ಛತಾ ಪಕ್ವಾಡ ಕಾರ್ಯಕ್ರಮ- 2024

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 13:45 IST
Last Updated 4 ಜುಲೈ 2024, 13:45 IST
ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು
ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು   

ಬಜಪೆ: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವತಿಯಿಂದ ಸ್ವಚ್ಛತಾ ಪಾಕ್ಷಿಕ ಸರ್ಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಗುರುವಾರ ನಡೆಯಿತು. ತ್ಯಾಜ್ಯ ನಿರ್ವಹಣೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.

ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಸಂಯೋಜಕ ರಂಜನ್ ಬೆಳ್ಳರ್ಪಾಡಿ ಮಾತನಾಡಿ, ಕಸವನ್ನು ಸೂಕ್ತವಾಗಿ ನಿರ್ವಹಣೆ ಮಾಡುವ ಸಾಧ್ಯತೆಗಳ ಬಗ್ಗೆ ತಿಳಿವಳಿಕೆ ಮೂಡಿಸಿದರು.

ಶಾಲೆಯ 50 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದಕ್ಕಾಗಿ ಎಂಆರ್‌ಪಿಎಲ್ ಸಂಸ್ಥೆಯನ್ನು ಅಭಿನಂದಿಸಲಾಯಿತು.

ADVERTISEMENT

ನಾಡಪ್ರಭು ಕೆಂಪೇಗೌಡ ಜನ್ಮದಿನೋತ್ಸವದ ಪ್ರಯುಕ್ತ ಮಂಗಳೂರು ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ 8ನೇ ತರಗತಿಯ ಅಪ್ಸಾನಾ ಬಾನು ಅವರನ್ನು ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುದೀಪ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು

ಎಂಆರ್‌ಪಿಎಲ್‌ನ ಮಾನವ ಸಂಪನ್ಮೂಲ ಅಧಿಕಾರಿ ಸ್ಟೀವನ್ ಪಿಂಟೊ, ಹಿರಿಯ ಅಧಿಕಾರಿ ನಾಗರಾಜ ರಾವ್, ಎಕ್ಕಾರು ಗ್ರಾ.ಪಂ ಉಪಾಧ್ಯಕ್ಷೆ ಪದ್ಮಾಕ್ಷಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸುರೇಶ್ ಕೆ., ಮೆಲ್ವಿನ್, ಬಬಿತಾ, ವಿನೋದಾ, ಮುಖ್ಯ ಶಿಕ್ಷಕಿ ಇಂದಿರಾ ಎನ್.ರಾವ್, ಶಿಕ್ಷಕಿಯರಾದ ಪೂರ್ಣಿಮಾ ಎಚ್.ಎಂ., ಜ್ಯೋತಿ ಬಿ., ರಾಜಶ್ರೀ ಕೆ., ರಮ್ಯಾ ಕೆ., ವಿದ್ಯಾಲತಾ, ವಿನ್ನಿ ನಿರ್ಮಲ ಡಿಸೋಜ, ಜಯಂತಿ ಎಂ., ಶಿಕ್ಷಕ ಅನಿತ್ ಕುಮಾರ್ ಭಾಗವಹಿಸಿದ್ದರು.

ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು

ವಿದ್ಯಾಗೌರಿ ಎಂ.ಕೆ.ಸ್ವಾಗತಿಸಿದರು, ಚಿತ್ರಾಶ್ರೀ ಕೆ.ಎಸ್. ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.