ADVERTISEMENT

ಕಾನೂನಿನ ಪ್ರಕಾರ ತನಿಖೆ: ಹಸ್ತಕ್ಷೇಪ ಮಾಡುವುದಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 12:10 IST
Last Updated 13 ಏಪ್ರಿಲ್ 2022, 12:10 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ. ಎಲ್ಲಿಯೂ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ‌ ಅವರು, ವಿರೋಧ ಪಕ್ಷದವರು ಈ ವಿಚಾರದಲ್ಲಿ ತಪ್ಪುಗಳನ್ನು ಕಂಡುಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ತನಿಖೆಯಲ್ಲಿ ಹೊರಬೀಳಲಿದೆ. ಯಾರು ಏನು ಪಾತ್ರ ವಹಿಸಿದ್ದಾರೆ. ಇದರ ಹಿನ್ನೆಲೆ ಏನು ಎನ್ನುವ ಸತ್ಯಾಂಶ ತನಿಖೆಯಿಂದ ತಿಳಿಯಲಿದೆ. ವರಿಷ್ಠರಿಗೆ ವಿಷಯ ತಿಳಿದಿದೆ ಎಂದರು.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಎಫ್.ಐ.ಆರ್ ಆಗಿದೆ. ವಿವರಗಳನ್ನು ಪಡೆಯಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಈ ಬಗ್ಗೆ ದೂರವಾಣಿ ಮೂಲಕ ಹಾಗೂ ನೇರವಾಗಿ ಮಾತನಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ADVERTISEMENT

ಮುಖ್ಯಮಂತ್ರಿಗಳು ಸೂಚಿಸಿದರೆ ರಾಜೀನಾಮೆ ನೀಡುವುದಾಗಿಈಶ್ವರಪ್ಪ ಅವರು ಹೇಳಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ. ನೇರವಾಗಿ ಮಾತನಾಡಿದರೆ ಸ್ಪಷ್ಟವಾಗುತ್ತದೆ. ಕೆಲವು ವಿಚಾರಗಳನ್ನು ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.