ADVERTISEMENT

ಸಹಕಾರ ಸಂಘ ಎಲ್ಲರನ್ನೂ ತಲುಪಲಿ: ಎಂ.ಎನ್‌. ರಾಜೇಂದ್ರ ಕುಮಾರ್

ಉಪ್ಪಿನಂಗಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ: ಎಂ.ಎನ್‌. ರಾಜೇಂದ್ರ ಕುಮಾರ್

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 5:44 IST
Last Updated 21 ನವೆಂಬರ್ 2022, 5:44 IST
ಸಹಕಾರ ಸಪ್ತಾಹದ ಸಮಾರೋಪವನ್ನು ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಇದ್ದರು
ಸಹಕಾರ ಸಪ್ತಾಹದ ಸಮಾರೋಪವನ್ನು ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ಶಾಸಕ ಸಂಜೀವ ಮಠಂದೂರು ಇದ್ದರು   

ಉಪ್ಪಿನಂಗಡಿ: ದೇಶದಲ್ಲಿ ಕೇವಲ 30 ಕೋಟಿಯಷ್ಟು ಜನರು ಮಾತ್ರ ಸಹಕಾರಿ ವ್ಯವಸ್ಥೆಗೆ ಒಳಗಾಗಿದ್ದು, ಕಟ್ಟ ಕಡೆಯ ವ್ಯಕ್ತಿಯನ್ನೂ ಒಳಗೊಳ್ಳುವುದು ಸಹಕಾರಿ ಸಂಸ್ಥೆಗಳ ಗುರಿಯಾಗಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಇಲ್ಲಿ ಭಾನುವಾರ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಸಮಾರೋಪವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ, ಕೇಂದ್ರ ಸರ್ಕಾರವು ರೈತರ ಅನುಕೂಲತೆಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಸಹಕಾರ ತತ್ವದಡಿ ಅದೆಲ್ಲವೂ ರೈತರನ್ನು ತಲುಪಲಿದೆ ಎಂದರು.

ADVERTISEMENT

ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರ ನಾರಾಯಣ ಖಂಡಿಗೆ, ಧ್ವಜಾರೋಹಣ ನೆರವೇರಿಸಿದ ದ.ಕ. ಜಿಲ್ಲಾ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಪ್ಪಿನಂಗಡಿ ಸಹಕಾರಿ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್ ಕಾಯರ್ಪಾಡಿ ಮಾತನಾಡಿದರು.

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ರಾಜಶೇಖರ ಜೈನ್, ಶಶಿಕುಮಾರ್ ರೈ ಬಾಲ್ಯೊಟ್ಟು, ಬಿ. ನಿರಂಜನ್, ಸಾವಿತ್ರಿ ರೈ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್, ಪುತ್ತೂರು ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಕೃಷ್ಣಕುಮಾರ್ ರೈ, ಪುತ್ತೂರು ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರವೀಣ್ ರೈ ಮೇನಾಲ, ಉಪ್ಪಿನಂಗಡಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.