ಮಂಗಳೂರು: ಸಹಕಾರ ಆಂದೋಲನ ಜನರ ಆಂದೋಲನವಾಗಿ ರೂಪುಗೊಳ್ಳಬೇಕು. ಸಹಕಾರ ಸಂಸ್ಥೆಗಳು ಜಾತ್ಯತೀತ, ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡುವಂತಾಗಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೆಚ್ಚು ಮಾಡುವ ಜೊತೆಗೆ ಅವರ ಬೇಡಿಕೆ ಪೂರೈಸಿದರೆ ಸಹಕಾರ ಕ್ಷೇತ್ರ ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಗ್ರಾಮೀಣ ಜನರು, ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುವಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ದೊಡ್ಡದು ಎಂದರು.
ಹಿರಿಯರ ತ್ಯಾಗ, ನಿಸ್ವಾರ್ಥ ಸೇವೆಯಿಂದ ಸಹಕಾರ ಕ್ಷೇತ್ರ ಈ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ. ಯುವಜನರು ಹಿರಿಯರಿಗೆ ಹೆಗಲು ಕೊಟ್ಟು ಈ ಕ್ಷೇತ್ರವನ್ನು ಇನ್ನಷ್ಟು ಉಚ್ಛ್ರಾಯಕ್ಕೆ ಕೊಂಡೊಯ್ಯಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಲಕ್ಷ್ಮಣ ಸವದಿ, ಜಿ.ಟಿ. ದೇವೇಗೌಡ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಇದ್ದರು. ದೇವಿಪ್ರಸಾದ ಶೆಟ್ಟಿ ಬೆಳಪು ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.