ADVERTISEMENT

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್‌ನಿಂದ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 24 ಮೇ 2023, 14:01 IST
Last Updated 24 ಮೇ 2023, 14:01 IST
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಘಟಕದಿಂದ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ನೀಡಲಾಯಿತು
ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಘಟಕದಿಂದ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ನೀಡಲಾಯಿತು   

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರು ಮೇ 22ರಂದು  ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂಗಳ ಕೊಲೆ ಮಾಡಿದರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಬುಧವಾರ ಇಲ್ಲಿನ ಠಾಣೆಯಲ್ಲಿ ದೂರು ನೀಡಲಾಗಿದೆ.

ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜಾರಿ ಉಪಾಧ್ಯಕ್ಷೆ ಮಮತಾ, ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್ , ಕಾರ್ಯದರ್ಶಿ ಸಿಂಧೂ ಡಿನ್ನಿಸ್, ರೇವತಿ ಉಜಿರೆ, ಸದಸ್ಯರಾದ ಕಸ್ತೂರಿ ಪೂಜಾರಿ, ಕುಸುಮಾ ಮಾಚಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT