ADVERTISEMENT

ಆಧುನಿಕ ಭಾರತಕ್ಕೆ ಬುನಾದಿ ಹಾಕಿದ ನೆಹರೂ: ಹರೀಶ್‌ ಕುಮಾರ್‌

ಕಾಂಗ್ರೆಸ್‌ನಿಂದ ನೆಹರೂ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2024, 5:57 IST
Last Updated 15 ನವೆಂಬರ್ 2024, 5:57 IST
ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜವಹರಲಾಲ್ ನೆಹರೂ ಜನ್ಮದಿನವನ್ನು ನಗರದಲ್ಲಿ ಗುರುವಾರ ಆಚರಿಸಲಾಯಿತು
ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜವಹರಲಾಲ್ ನೆಹರೂ ಜನ್ಮದಿನವನ್ನು ನಗರದಲ್ಲಿ ಗುರುವಾರ ಆಚರಿಸಲಾಯಿತು   

ಮಂಗಳೂರು: ಜವಾಹರಲಾಲ್ ನೆಹರೂ ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅರ 135ನೇ ಜನ್ಮ ದಿನಾಚರಣೆ ಅಂಗವಾಗಿ ನೆಹರೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಪಾಲಿಕೆ ಸದಸ್ಯರಾದ ಶಶಿಧರ್ ಹೆಗ್ಡೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ರಾಜ್ಯ ಗೇರು ಅಭಿವೃದ್ಧಿ ನಿಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ನಜೀರ್ ಬಜಾಲ್, ಮುಖಂಡರಾದ ಪದ್ಮನಾಭ ಅಮೀನ್, ಸಂಶುದ್ದೀನ್ ಬಂದರ್, ಶುಭೋದಯ ಆಳ್ವ, ಚಂದ್ರಕಲಾ ಜೋಗಿ, ರೂಪಾ ಚೇತನ್, ಟಿ.ಕೆ. ಶೈಲಜಾ, ಮಂಜುಳಾ ನಾಯಕ್, ಶಾಂತಲ ಗಟ್ಟಿ, ವಸಂತಿ ಅಂಚನ್, ಮೋಹಿನಿ ಅಮೀನ್, ಸಬಿತಾ, ನೀನಾ, ಪ್ರಿಯಾ ಅಂದ್ರಾದೆ, ಸುನೀಲ್ ಬಜಿಲಕೇರಿ, ಯೋಗೀಶ್   ಕದ್ರಿ ಮೊದಲಾದವರು ಭಾಗವಹಿಸಿದ್ದರು.

ADVERTISEMENT

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಸ್ವಾಗತಿಸಿದರು, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.