ಮೂಲ್ಕಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಗ್ಯಾರಂಟಿ ಸಹಿತ ಅನೇಕ ಜನಪ್ರಿಯ ಯೋಜನೆಗಳು ಜಾರಿಗೆ ಬಂದಿದ್ದು, ಜನರ ಬದುಕು ಹಸನಾಗಿದೆ. ಬಿಜೆಪಿಯವರು ಅಪಪ್ರಚಾರದ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳಲು ಕುತಂತ್ರ ನಡೆಸುತ್ತಿದ್ದು, ಜನರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಬಗ್ಗೆ ಕಾರ್ಯಕರ್ತರು ಮಾಹಿತಿ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬಹುದು’ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಹಳೆಯಂಗಡಿಯ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯೋಜನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿ ಆಡಳಿತದಿಂದ ಜಿಲ್ಲೆಯ ಅಭಿವೃದ್ಧಿ ಸ್ಥಗಿತಗೊಂಡಿದೆ. ಜನರಲ್ಲಿ ಕೋಮು ಸಾಮರಸ್ಯ ಭಾವನೆ ಕಡಿಮೆಯಾಗುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯ ಜತೆಗೆ ಬೀಚ್‌ಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ವೀಕ್ಷಕ ವಸಂತ್ ಬರ್ನಾಡ್, ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರಮುಖರಾದ ಮಂಜುನಾಥ ಕಂಬಾರ, ಗುರುರಾಜ್ ಎಸ್.ಪೂಜಾರಿ, ಅಶೋಕ್, ಶಾಹುಲ್ ಹಮೀದ್ ಬಜ್ಪೆ, ಪ್ರಮೋದ್ ಕುಮಾರ್, ಸುರೇಶ್, ಹಸನಬ್ಬ, ಆಲ್ವಿನ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.