ಮಂಗಳೂರು: ಮೈಸೂರಿನಲ್ಲಿ ಪ್ರಾಚೀನ ದೇವಾಲಯವನ್ನು ಕೆಡವಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಂಜನಗೂಡಿನ ದೇವಸ್ಥಾನ ಒಡೆದು ಹಾಕಿರುವುದಾಗಿ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ.
ಇದೇ ಆದೇಶ 2009ರಲ್ಲೂ ಇತ್ತು. ಆದರೆ, ಕಾಂಗ್ರೆಸ್ ಸರ್ಕಾರ ಧಾರ್ಮಿಕ ಕೇಂದ್ರಗಳನ್ನು ಏಕಾಏಕಿ ಒಡೆಯುವ ಕೆಲಸ ಮಾಡಿಲ್ಲ. ಧಾರ್ಮಿಕ ಕೇಂದ್ರಗಳ ಜೊತೆ ಜನರ ನಂಬಿಕೆ, ಆಚರಣೆಗಳು ಸೇರಿಕೊಂಡಿರುತ್ತವೆ. ಈ ಸೂಕ್ಷ್ಮ ವಿಚಾರ ತಿಳಿದುಕೊಳ್ಳುವಲ್ಲಿ ಬಿಜೆಪಿ ವಿಫಲವಾಗಿದೆ. ಅಕ್ರಮವಾಗಿ ಕಟ್ಟಿದ್ದ ಧಾರ್ಮಿಕ ಕೇಂದ್ರಗಳನ್ನು ಸಕ್ರಮಗೊಳಿಸುವ ಬಗ್ಗೆ ಸರ್ಕಾರ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.