ಬೆಳ್ತಂಗಡಿ: ‘ತಪ್ಪು ಮಾಡುವುದು ಸಹಜ. ಆದರೆ, ಬೆಳ್ತಂಗಡಿಯ ಶಾಸಕರು ತಾಲ್ಲೂಕಿನ ಜನ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಶಾಸಕರ ಸ್ಥಾನಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿದ್ದಾರೆ.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೊಲೀಸರು ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಅವರ ಕರ್ತವ್ಯ ಮಾಡಿದ್ದಾರೆ. ಅದಕ್ಕೆ ಅಡ್ಡಿಪಡಿಸಿದ ಶಾಸಕರ ಮೇಲೆ ಪ್ರಕರಣ ದಾಖಲಿಸಿ ನೋಟಿಸ್ ನೀಡಲು ಮನೆಗೆ ತೆರಳಿದ್ದಾರೆ. ಆದರೆ, ಹರೀಶ್ ಪೂಂಜ ಅವರು ಸಾಮಾನ್ಯ ಪ್ರಕರಣಕ್ಕೆ ಕಾರ್ಯಕರ್ತರನ್ನು, ವಕೀಲರನ್ನು ಮನೆಗೆ ಕರೆಸಿದ್ದಾರೆ’ ಎಂದು ಟೀಕಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಧರಣೇಂದ್ರ ಕುಮಾರ್, ನೇಮಿರಾಜ್ ಕಿಲ್ಲೂರು, ಶಾಫಿ ಇದ್ದರು.
ಬೆಳ್ತಂಗಡಿ: ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ ಅವರ ‘ನೆನಪಿನಂಗಳದಲ್ಲಿ ನೇರ ನಡೆ-ನುಡಿಯ ಸ್ವಾಭಿಮಾನಿ ನಾಯಕನಿಗೆ ಸಾವಿರದ ನುಡಿ ನಮನ’ ಕಾರ್ಯಕ್ರಮ ಮೇ 25ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ಜೈನ್ ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸುವರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ನುಡಿನಮನ ಸಲ್ಲಿಸುವರು ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಕೆ.ಬಂಗೇರ ಕಾಶಿಪಟ್ಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.