ಸುರತ್ಕಲ್: ಸೂರಿಂಜೆ ಗ್ರಾಮ ಪಂಚಾಯಿತಿಯ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗೀತಾ ಶೆಟ್ಟಿ ಶಿಬರೂರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಗೋಪಾಲ ಕುಲಾಲ್ ಆಯ್ಕೆಯಾದರು.
12 ಸದಸ್ಯರಿರುವ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ 6, ಕಾಂಗ್ರೆಸ್ ಬೆಂಬಲಿತ 2, ಎಸ್‌ಡಿಪಿಐ ಬೆಂಬಲಿತ ನಾಲ್ವರು ಸದಸ್ಯರಿದ್ದಾರೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಪದ್ಮಾವತಿ ಶೆಟ್ಟಿ ಕೋಟೆ ಮತ್ತು ಕಾಂಗ್ರೆಸ್‌ನಿಂದ ಗೀತಾ ಶೆಟ್ಟಿ ಶಿಬರೂರು ಸ್ಪರ್ದಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 7, ಬಿಜೆಪಿ ಬೆಂಬಲಿತ ಅಭ್ಯರ್ಥಿ 5 ಮತ ಪಡೆದರು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುಣಾವಣೆಯಲ್ಲಿ ಎಸ್‌ಡಿಪಿಐ ಬೆಂಬಲಿತ ಅಬ್ದುಲ್ ಮಾಲಿಕ್ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲಿತ ಸದಸ್ಯ ಗೋಪಾಲ ಕುಲಾಲ್ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸಮಬಲ ಸಾಧಿಸಿದಾಗ ಚೀಟಿ ಎತ್ತುವ ಮೂಲಕ ಬಿಜೆಪಿಯ ಗೋಪಾಲ ಕುಲಾಲ್ ಜಯ ಗಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.