ADVERTISEMENT

ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 5:25 IST
Last Updated 24 ಅಕ್ಟೋಬರ್ 2024, 5:25 IST
   

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಪ್ರತಿನಿಧಿಯ ಆಯ್ಕೆಗೆ ನಡೆಯುತ್ತಿರುವ ಉಪ ಚುನಾವಣೆಯ ಮತ ಎಣಿಕೆ ಇಲ್ಲಿನ ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಆರಂಭವಾಯಿತು.

ಮತಪೆಟ್ಟಿಗೆಗಳನ್ನು ಇಟ್ಟಿದ್ದ ಕೊಠಡಿಯ ಬಾಗಿಲನ್ನು ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಅಭ್ಯರ್ಥಿ ಗಳ ಏಜೆಂಟರ ಸಮ್ಮುಖದಲ್ಲಿ ತೆರೆಯಲಾಯಿತು. ಸಿಂಧು ಮತ್ತು ಅಸಿಂಧು ಮತಗಳನ್ನು ಬೇರ್ಪಡಿಸಿ, ಸಿಂಧುವಾಗಿರುವ ಮತಪತ್ರಗಳ 25ರ ಕಟ್ಟುಗಳನ್ಬು ತಯಾರಿಸಿ ಮಿಶ್ರಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ಕಣದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ, ಕಾಂಗ್ರೆಸ್ ನ ರಾಜು ಪೂಜಾರಿ, ಎಸ್ ಡಿಪಿಐನ ಅನ್ವರ್ ಸಾದಿಕ್ ಹಾಗೂ ದಿನಕರ ಉಳ್ಳಾಲ (ಪಕ್ಷೇತರ) ಕಣದಲ್ಲಿ ಇದ್ದಾರೆ.

ADVERTISEMENT

ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನ ಭರ್ತಿಗಾಗಿ ಉಪ ಚುನಾವಣೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.