ADVERTISEMENT

ಬಂಟ್ವಾಳ: ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 13:31 IST
Last Updated 20 ಅಕ್ಟೋಬರ್ 2024, 13:31 IST
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಧಾನಪರಿಷತ್ ಚುನಾವಣೆಯ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭಾನುವಾರ ಭೇಟಿ ನೀಡಿದರು. ತಹಶೀಲ್ದಾರ್ ಅರ್ಚನಾ ಡಿ.ಭಟ್ ಮತಗಟ್ಟೆಗಳ ಬಗ್ಗೆ ಮಾಹಿತಿ ನೀಡಿದರು.

ನಗರ ಠಾಣೆ ಇನ್‌ಸ್ಪೆಕ್ಟರ್‌ ಅನಂತ ಪದ್ಮನಾಭ, ಗ್ರಾಮಾಂತರ ಇನ್‌ಸ್ಪೆಕ್ಟರ್‌ ಶಿವಕುಮಾರ್, ಪಿಎಸ್‌ಐ ರಾಮಕೃಷ್ಣ, ಹರೀಶ್, ಸುತೇಶ್, ಸಂಜೀವ, ಉಪತಹಶೀಲ್ದಾರ್ ನವೀನ್ ಬೆಂಜನಪದವು, ನರೇಂದ್ರ ಭಟ್, ಕಂದಾಯ ನಿರೀಕ್ಷಕ ಜನಾರ್ದನ, ವಿಜಯ್, ಪ್ರಶಾಂತ್ ವಿಟ್ಲ ಜತೆಗಿದ್ದರು.

ತಾಲ್ಲೂಕಿನಲ್ಲಿ 795 ಮಂದಿ ಮತದಾರರಿದ್ದು, ಈ ಪೈಕಿ 381 ಪುರುಷರು ಮತ್ತು 414 ಮಹಿಳೆಯರಿದ್ದಾರೆ. 51 ಗ್ರಾಮ ಪಂಚಾಯಿತಿ ಸೇರಿದಂತೆ ಬಂಟ್ವಾಳ ಪುರಸಭೆ ಮತ್ತು ವಿಟ್ಲ ಪಟ್ಟಣ ಪಂಚಾಯಿತಿಯ 53 ಮತಗಟ್ಟೆಗಳಲ್ಲಿ ಅ.21ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.

ADVERTISEMENT

ಒಟ್ಟು 6 ಸೆಕ್ಟರ್ ಅಧಿಕಾರಿ ಸಹಿತ 53 ಪಿಆರ್‌ಒ, 53 ಎಪಿಆರ್‌ಒ, 53 ಪಿ.ಒ.ಅಧಿಕಾರಿ ಹಾಗೂ 53 ಡಿಗ್ರೂಪ್ ನೌಕರರು ಸೇರಿ 216 ಮಂದಿ ಸಿಬ್ಬಂದಿ ಮತ್ತು 5 ಮೈಕ್ರೋ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.