ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಹಾಗೂ ಶಾರದಾಂಬ ಉತ್ಸವ ಸಮಿತಿ ಆಶ್ರಯದಲ್ಲಿ 53ನೇ ವರ್ಷದ ಸುಳ್ಯ ದಸರಾದ ಶೋಭಾಯಾತ್ರೆ ಮಹಾಪೂಜೆಯಾಗಿ ಗುರುವಾರ ಸಂಜೆ ಆರಂಭಗೊಂಡಿತು.
ದೇವಿಗೆ ವಿಶೇಷ ಅಲಂಕಾರದೊಂದಿಗೆ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪದಲ್ಲಿ ದೇವಿಯ ಶೋಭಾಯಾತ್ರೆ ಸಾಗಿತು. ಸ್ತಬ್ಧ ಚಿತ್ರಗಳು, ನಾಸಿಕ್ ಬ್ಯಾಂಡ್‌ನ ಅಬ್ಬರ, ಕೊಂಬು, ಕಹಳೆ, ವಾಲಗ, ವಿಶೇಷ ಸಿಡಿಮದ್ದು, ನೃತ್ಯ ಭಜನೆಯೂ ಮೆರವಣಿಗೆಗೆ ಮೆರುಗು ನೀಡಿದವು.
ದಸರಾ ಉತ್ಸವದ ಶೋಭಾಯಾತ್ರೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಚಾಲನೆ ನೀಡಿದರು. ದಸರಾ ಉತ್ಸವ ಸಮಿತಿ ಅಧ್ಯಕ್ಷೆ, ಶಾಸಕಿ ಭಾಗೀರಥಿ ಮುರುಳ್ಯ, ಶಾರದಾಂಬಾ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಲೀಲಾಧರ ಡಿ.ವಿ., ಸುಳ್ಯ ಸಾರ್ವಜನಿಕ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್, ಕೋಶಾಧಿಕಾರಿ ಅಶೋಕ್ ಪ್ರಭು, ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ ಭಾಗವಹಿಸಿದ್ದರು.
ವಿವಿಧ ಧಾರ್ಮಿಕ ಹಾಗೂ ವೈವಿಧ್ಯಮಯ ಕಲಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 9 ದಿನ ನಡೆದ ಸುಳ್ಯ ದಸರಾ ಉತ್ಸವ ಸಂಭ್ರಮದ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.