ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರ ರಂಗಕ್ಕೆ ಗಟ್ಟಿ ತಳಪಾಯ ಹಾಕಿದವರು ದಿ.ಮೊಳಹಳ್ಳಿ ಶಿವರಾಯರು. ಸಹಕಾರಿ ಕ್ಷೇತ್ರ ಇಂದು ಹೆಮ್ಮರವಾಗಿ ಬೆಳೆಯಲು ಅವರ ದೂರದರ್ಶಿತ್ವ ಕಾರಣ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೆಂದ್ರ ಕುಮಾರ್ ಹೇಳಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಮತ್ತು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸಹಕಾರ ರಂಗದ ಪಿತಾಮಹ ದಿ.ಮೊಳಹಳ್ಳಿ ಶಿವರಾವ್ ಅವರ 144ನೇ ಜನ್ಮದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ದೇಶಕ್ಕೆ ಸ್ವಾತಂತ್ರ್ಯ ಸಿಗುವ ಮುನ್ನವೇ ಹುಟ್ಟೂರಿನಲ್ಲಿ ಸಹಕಾರಿ ಸಂಸ್ಥೆ ಸ್ಥಾಪಿಸಿದ್ದ ಶಿವರಾಯರು ಎತ್ತಿನ ಗಾಡಿಯಲ್ಲಿ ಸುತ್ತಾಡಿ, ಸಹಕಾರ ಚಳವಳಿ ಕುರಿತು ಜನರಲ್ಲಿ ಅರಿವು ಮೂಡಿಸಿದ್ದರು. ಸಹಕಾರಿ ರಂಗದ ಇಂದಿನ ಧುರೀಣರು ಅವರು ತೋರಿದ ಮಾರ್ಗದಲ್ಲಿ ಮುನ್ನಡೆಯಬೇಕು’ ಎಂದರು.
ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿ, ಸಹಕಾರಿ ಪ್ರತಿಜ್ಞೆ ಸ್ವೀಕರಿಸಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಮೋನಪ್ಪ ಶೆಟ್ಟಿ ಎಕ್ಕಾರು, ಎಂ.ಮಹೇಶ್ ಹೆಗ್ಡೆ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ , ರಾಜು ಪೂಜಾರಿ, ಕೆ.ಹರಿಶ್ಚಂದ್ರ, ಕೆ. ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಜನತಾ ಬಜಾರ್ ಅಧ್ಯಕ್ಷ ಪುರುಷೋತ್ತಮ ಭಟ್, ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಹರೀಶ್ ಆಚಾರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಯೂನಿಯನ್ ಕಾರ್ಯದರ್ಶಿ ಎಸ್. ವಿ. ಹಿರೇಮಠ, ನಿರ್ದೇಶಕಿ ಕೆ.ಸಾವಿತ್ರಿ ರೈ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.