ADVERTISEMENT

ರಾಹುಲ್ ಗಾಂಧಿ ನಿಂದನೆ | ಕಾಂಗ್ರೆಸ್ ಪಕ್ಷ ಸುಮ್ಮನೆ ಕೂರದು: ಅಶೋಕ್ ರೈ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 14:22 IST
Last Updated 13 ಜುಲೈ 2024, 14:22 IST
ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು
ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು   

ಪುತ್ತೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಭರತ್ ಶೆಟ್ಟಿ ಅವರು ಅವಹೇಳನಕಾರಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಶನಿವಾರ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.

ಅಶೋಕ್ ಕುಮಾರ್ ರೈ ಮಾತನಾಡಿ, ‘ಪಕ್ಷದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಭರತ್‌ ಶೆಟ್ಟಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಸಾಂವಿಧಾನಿಕ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಾವು ನಿಮ್ಮಂತೆ ಕೆಟ್ಟ ಶಬ್ದ ಬಳಕೆ ಮಾಡುವುದಿಲ್ಲ. ನೀವು ಬದಲಾವಣೆ ಆಗುವುದು ನಿಮಗೂ, ಸಮಾಜಕ್ಕೂ, ನಿಮ್ಮ ಪಕ್ಷಕ್ಕೂ ಒಳ್ಳೆದು. ಬದಲಾವಣೆ ಆಗದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮಂತೆ ಮಾತನಾಡುವ ಪ್ರವೃತ್ತಿಯನ್ನು ನಾವೂ ಬೆಳೆಸಿಕೊಳ್ಳಬೇಕಾಗಿ ಬರಬಹುದು’ ಎಂದು ಎಚ್ಚರಿಸಿದರು.

‘ನಮ್ಮ ಆಚಾರ–ವಿಚಾರಕ್ಕೆ ತೊಂದರೆಯಾದರೆ, ಕೃಷಿಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ತೊಂದರೆಯಾದರೆ, ಜನರಿಗೆ ತೊಂದರೆ ಆದರೆ ಹೋರಾಟ ಮಾಡಿ. ಅಭಿವೃದ್ಧಿಗಾಗಿ ಹೋರಾಟ ಮಾಡುವುದನ್ನು ಬಿಟ್ಟು ನಾಯಕರೊಬ್ಬರಿಗೆ ಈ ಪದ ಬಳಸುವುದು ಒಳ್ಳೆಯದಲ್ಲ. ಈ ರೀತಿ ಮುಂದುವರಿದರೆ ಕಾಂಗ್ರೆಸ್ ಪಕ್ಷ ಸುಮ್ಮನೆ ಕುಳಿತುಕೊಳ್ಳುವುದಿಲ್ಲ’ ಎಂದು ಅವರು ಎಚ್ಚರಿಸಿದರು.

ADVERTISEMENT

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಭರತ್ ಶೆಟ್ಟಿ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಸದಸ್ಯ ಎಂ.ಎಸ್.ಮಹಮ್ಮದ್ ಮಾತನಾಡಿದರು.

ಪ್ರಮುಖರಾದ ಡಾ.ರಾಜಾರಾಮ್ ಕೆ.ಬಿ.,ಮಹಮ್ಮದ್ ಬಡಗನ್ನೂರು, ಅಮಳ ರಾಮಚಂದ್ರ, ಕೃಷ್ಣಪ್ರಸಾದ್ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಎಚ್.ಮಹಮ್ಮದ್ ಅಲಿ, ಶ್ರೀಪ್ರಸಾದ್ ಪಾಣಾಜೆ, ಭಾಸ್ಕರ್ ಗೌಡ ಕೋಡಿಂಬಾಳ, ಎನ್.ಚಂದ್ರಹಾಸ ಶೆಟ್ಟಿ, ಶಕೂರ್, ಪ್ರಸಾದ್ ಕೌಶಲ್ ಶೆಟ್ಟಿ, ಶಶಿಕಿರಣ್ ರೈ, ಕುಂಬ್ರ ದುರ್ಗಾಪ್ರಸಾದ್ ರೈ, ಫಾರೂಕ್ ಬಾಯಬ್ಬೆ, ಬಶೀರ್ ಪರ್ಲಡ್ಕ, ಮೋನು ಬಪ್ಪಳಿಗೆ, ರಂಜಿತ್ ಬಂಗೇರ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಸಂತೋಷ್ ಭಂಡಾರಿ ಚಿಲ್ಕೆತ್ತಾರು, ಸುದೇಶ್ ಕುಮಾರ್ ಚಿಕ್ಕಪುತ್ತೂರು, ನೇಮಾಕ್ಷ ಸುವರ್ಣ, ಮನಮೋಹನ್, ರಿಯಾಜ್ ಪರ್ಲಡ್ಕ, ದಿನೇಶ್ ಶೇವಿರೆ, ಜಯಂತಿ ಬಲ್ನಾಡು, ಮುಕೇಶ್ ಕೆಮ್ಮಿಂಜೆ, ಸದಸ್ಯರಾದ ನಿಹಾಲ್ ಪಿ.ಶೆಟ್ಟಿ, ಅನ್ವರ್ ಖಾಸಿಂ, ಲ್ಯಾನ್ಸಿ ಮಸ್ಕರೇನಸ್, ಬೊಳೋಡಿ ಚಂದ್ರಹಾಸ ರೈ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.