ADVERTISEMENT

ಸುಬ್ರಹ್ಮಣ್ಯ | ದೇಶದಲ್ಲಿ ಅಭಿವೃದ್ಧಿಯ ಬದಲಾವಣೆ; ಕಟೀಲ್

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2023, 14:37 IST
Last Updated 31 ಡಿಸೆಂಬರ್ 2023, 14:37 IST
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿದರು
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿದರು   

ಸುಬ್ರಹ್ಮಣ್ಯ: ‘ಭಾರತ ವಿಶ್ವ ಗುರುವಾಗಿದ್ದು, ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರಾಗಿದ್ದಾರೆ. ಈ ಮೂಲಕ ಭಾರತದ ಕೀರ್ತಿ ಎತ್ತರಕ್ಕೆ ಏರಿದೆ. ಈ ಹಿಂದೆ ಆಗದೆ ಇದ್ದ ದೇಶದ ಅಭಿವೃದ್ಧಿ ಈಗ ಸಾಕಾರಗೊಂಡಿದೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಪಂಜ ಗ್ರಾಮ ಪಂಚಾಯಿತಿ ಮತ್ತು ಪಂಜ ಕೆನರಾ ಬ್ಯಾಂಕ್ ವತಿಯಿಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಬಡವರ ಸಂರಕ್ಷಣೆ, ಕೃಷಿಕರ ಹಾಗೂ ಎಲ್ಲ ಜನರ ಅಭಿವೃದ್ಧಿಗಾಗಿ ಯೋಜನೆಗಳು ಬಂದಿವೆ. ಭ್ರಷ್ಟಾಚಾರ ರಹಿತ ಅಭಿವೃದ್ಧಿ ಪರ ಆಡಳಿತವಾಗಿದೆ. ಪ್ರತಿಯೊಬ್ಬರಿಗೂ ಸರ್ಕಾರದ ಯೋಜನೆಗಳು ತಲುಪಬೇಕೆಂದು, ಮನೆ ಬಾಗಿಲಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯುತ್ತಿದೆ ಎಂದು ಅವರು ಹೇಳಿದರು.

ADVERTISEMENT

ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ ಕಾರ್ಯಕ್ರಮ ಉದ್ಘಾಟಿಸಿದರು.

ಗ್ರಾ.ಪಂ.ಅಧ್ಯಕ್ಷೆ ವಿಜಯಲಕ್ಷ್ಮೀ ಜಳಕದಹೊಳೆ ಅಧ್ಯಕ್ಷತೆ ವಹಿಸಿದ್ದರು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸಿ.ಚಂದ್ರಶೇಖರ ಶಾಸ್ತ್ರಿ ಮಾತನಾಡಿದರು. ಪಂಜ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಘವೇಂದ್ರ ತೇಜಾ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡಿದರು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಪೈ, ಕೆನರಾ ಬ್ಯಾಂಕ್‌ನ ಎಫ್ಎಲ್‌ಸಿ ಸುಜಾತಾ, ಪಿಡಿಒ ಜಯಂತ, ಕಾರ್ಯದರ್ಶಿ ಗೋಪಾಲಕೃಷ್ಣ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಾಧಕರನ್ನು ಗೌರವಿಸಲಾಯಿತು. ಜಯಂತ ಸ್ವಾಗತಿಸಿ, ವಂದಿಸಿದರು. ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯರಾಮ ಕಲ್ಲಾಜೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.