ಬಂಟ್ವಾಳ: ಇಲ್ಲಿನ ತುಂಬೆ ಸಮೀಪದ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಉರುಳಿ ಡಿವೈಡರ್ಗೆ ಹಾನಿ ಉಂಟಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಅವಘಡ ನಡೆದಿದೆ. ಇದರಿಂದಾಗಿ ಕೆಲಹೊತ್ತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.
ಗ್ಯಾಸ್ ಸೋರಿಕೆಯಾಗದ ಪರಿಣಾಮ ಹೆಚ್ಚಿನ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳ, ಸಂಚಾರ ಠಾಣೆ ಪೊಲೀಸರು ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.