ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳದಲ್ಲಿ ಬುಧವಾರ ನಡೆದ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮಂಗಳಸೂತ್ರ ಧಾರಣೆಗೆ ನೂರಾರು ಜನರು ಸಾಕ್ಷಿಯಾದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಗೆ ವಧು– ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಸಭಾಭವನದಲ್ಲಿ ಹಾಜರಾದರು. ವೀರೇಂದ್ರ ಹೆಗ್ಗಡೆ ದಂಪತಿ ಜೊತೆ ಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳ ಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿಗಳನ್ನು ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.