ಉಜಿರೆ: ಧರ್ಮಸ್ಥಳದಲ್ಲಿ ಅ.24ರಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ನಡೆಯಲಿದೆ.
ಊರಿನ ನಾಗರಿಕರು, ದೇವಳ ನೌಕರರು, ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ನೌಕರರು, ಆಪ್ತರು, ಬಂಧುಗಳು, ಅಭಿಮಾನಿಗಳು ಹಾಗೂ ಧರ್ಮಸ್ಥಳದ ಭಕ್ತರು ಹೆಗ್ಗಡೆ ಅವರಿಗೆ ಗೌರವಾಪಣೆ ಮಾಡುವರು. ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ದೇವಳದ ನೌಕರರಿಗೆ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಸಂಜೆ 4 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ಹರೀಶ್ ಪೂಂಜ, ಕೆ.ಪ್ರತಾಪ್ಸಿಂಹ ನಾಯಕ್, ಕಾಂಗ್ರೆಸ್ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಹರೀಶ್ಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.