ADVERTISEMENT

ಜಗತ್ತಿನ ಎಲ್ಲ ದೇಶಗಳಲ್ಲಿ ಹಿಂದುತ್ವದ ಕುರುಹು: ಡಾ. ಪ್ರಭಾಕರ ಭಟ್ ಕಲ್ಲಡ್ಕ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 5:13 IST
Last Updated 1 ಡಿಸೆಂಬರ್ 2023, 5:13 IST
ಶಕ್ತಿ ಶಾಲೆಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ಭಾರತ ಮಾತೆ ಚಿತ್ರಕ್ಕೆ ಪುಷ್ಪ ಸಮರ್ಪಿಸಿದರು
ಶಕ್ತಿ ಶಾಲೆಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ಭಾರತ ಮಾತೆ ಚಿತ್ರಕ್ಕೆ ಪುಷ್ಪ ಸಮರ್ಪಿಸಿದರು   

ಮಂಗಳೂರು: ‘ನಮ್ಮ ಸನಾತನ ಪರಂಪರೆಯ ಆದರ್ಶ ಚಿಂತನೆಗಳನ್ನು ಭಾರತ ಎಲ್ಲರಿಗೂ ತಿಳಿಹೇಳಿದೆ. ಜಗತ್ತಿನ ಯಾವುದೇ ದೇಶಕ್ಕೆ ತೆರಳಿದರೂ ಅಲ್ಲಿ ಭಾರತೀಯತೆಯ, ಹಿಂದುತ್ವದ ಕುರುಹು ಇದೆ’ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆ ವತಿಯಿಂದ ಶಕ್ತಿ ಕಾಲೇಜಿನಲ್ಲಿ ಗುರುವಾರ ನಡೆದ ‘ಶಕ್ತಿ- ಸನಾತನ ಸಂಪದ’ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಭಾರತ ಉಳಿದ ದೇಶಗಳಿಗಿಂತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ. ದೇಶಕ್ಕಾಗಿ ತಾಯಂದಿರು ಹೋರಾಟ ಮಾಡಿದ ದೇಶ ಇದ್ದರೆ ಅದು ಭಾರತ ಮಾತ್ರ. ನಾವು ಎಷ್ಟೇ ಎತ್ತರಕ್ಕೆ ಏರಿದರೂ ನಮ್ಮ ಧರ್ಮ, ಸಂಸ್ಕೃತಿ, ಜೀವನ ಮೌಲ್ಯಗಳನ್ನು ಬಿಡಬಾರದು’ ಎಂದರು.

ADVERTISEMENT

ಗುರುಪುರ ವಜ್ರದೇಹಿ ಸಂಸ್ಥಾನದ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಎಂಬ ಶಬ್ದ ಪ್ರಾಚೀನವಾದುದು. ಬುದ್ದಿಜೀವಿಗಳು ಇದರ ಬಗ್ಗೆ ಅಪಾರ್ಥ ಬರುವಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದರು.


ಶಕ್ತಿ ಎಜುಕೇಶನ್ ಟ್ರಸ್ಟ್ ಆಡಳಿತಾಧಿಕಾರಿ ಕೆ.ಸಿ. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಶಕ್ತಿ ಎಜುಕೇಶನ್ ಟ್ರಸ್ಟ್ ಮುಖ್ಯ ಸಲಹೆಗಾರ ರಮೇಶ್ ಕೆ. ಮಾತನಾಡಿ, ಸರಣಿ ಕಾರ್ಯಕ್ರಮದಡಿ ತಿಂಗಳಲ್ಲಿ ಎರಡು ಶನಿವಾರ ಉಪನ್ಯಾಸ ನಡೆಯಲಿದ್ದು, ರಾಮಾಯಣ, ಮಹಾಭಾರತ, ಪುರಾಣ, ವೇದ, ಶೌರ್ಯ, ಪರಂಪರೆ ಸಹಿತ 25 ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಪ್ರಾಂಶುಪಾಲ ವೆಂಕಟೇಶಮೂರ್ತಿ ಎಚ್. ಇದ್ದರು. ಶಕ್ತಿ ವಸತಿ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.