ಸುಳ್ಯ: ಇಲ್ಲಿನ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶಾರದಾಂಬ ಸೇವಾ ಸಮಿತಿ, ಸುಳ್ಯ ತಾಲ್ಲೂಕು ದಸರಾ ಉತ್ಸವ ಸಮಿತಿ ವತಿಯಿಂದ 53ನೇ ವರ್ಷದ ದಸರಾ ಉತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು.
ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಶಾರದಾ ದೇವಿಯ ಪ್ರತಿಷ್ಠೆಯೊಂದಿಗೆ ಉತ್ಸವ ಆರಂಭಗೊಂಡಿತು. ಸುಳ್ಯ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಆರಂಭಗೊಂಡ ಉತ್ಸವ ಮೂರ್ತಿ ಮೆರವಣಿಗೆಯು ಸುಳ್ಯದ ಪ್ರಮುಖ ರಸ್ತೆಯಲ್ಲಿ ಸಾಗಿತು.
ಶಾರದಾಂಬ ಉತ್ಸವ ಸಮಿತಿಯ ಗೌರವ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಅಧ್ಯಕ್ಷ ಲೀಲಾಧರ್ ಡಿ. ವಿ., ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಕೋಶಾಧಿಕಾರಿ ಗಣೇಶ್ ಆಳ್ವ,ಶಾರದಾಂಬ ಸೇವಾ ಸಮಿತಿಯ ಗೌರವ ಅಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಕೋಶಾಧಿಕಾರಿ ಅಶೋಕ್ ಪ್ರಭು, ಜತೆ ಕಾರ್ಯದರ್ಶಿ ಅನಿಲ್ ಕುಮಾರ್ ಕೆ.ಸಿ., ಗೌರವ ಸಲಹೆಗಾರ ಎನ್. ಜಯಪ್ರಕಾಶ್ ರೈ, ಎನ್.ಎ. ರಾಮಚಂದ್ರ, ಎಂ. ವೆಂಕಪ್ಪ ಗೌಡ, ಅಕ್ಷಯ್ ಕೆ.ಸಿ.ನವೀನ್ ಚಂದ್ರ, ಕೆ.ಎಸ್., ಕಾರ್ಯದರ್ಶಿ ಎಂ.ಕೆ. ಸತೀಶ್, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಖಜಾಂಜಿ ಸುನಿಲ್ ಕುಮಾರ್ ಕೇರ್ಪಳ, ಶಾರದಾಂಬ ಮಹಿಳಾ ಸಮಿತಿಯ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಕಾರ್ಯದರ್ಶಿ ಶ್ರೀದೇವಿ ನಾಗರಾಜ ಭಟ್, ಯಶೋದಾ ರಾಮಚಂದ್ರ, ಲತಾ ಮಧುಸೂದನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.