ಸುಳ್ಯ: ‘ಪ್ರವೀಣ್ ನೆಟ್ಟಾರು ಅವರಿಗೆ ಜೀವ ಬೆದರಿಕೆ ಇದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷದ್ದೇ ಸರ್ಕಾರ ಇದ್ದರೂ ಹತ್ಯೆ ತಪ್ಪಿಸಲು ಕ್ರಮ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಎಂಬ ಆರೋಪ ಇದೆ. ಇದು ನಿಜವಾಗಿದ್ದರೆ ಇದೊಂದು ಗಂಭೀರ ಲೋಪ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅಭಿಪ್ರಾಯಪಟ್ಟರು.
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ಪ್ರವೀಣ್ ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ ಹಾಗೂಪತ್ನಿ ನೂತನಾ ಅವರ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ರೈ ಎಸ್ಟೇಟ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್.ರೈ ಬಾಲ್ಯೊಟ್ಟು, ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ಬಾಳಿಲ, ಸುಳ್ಯ ತಾಲ್ಲೂಕು ಅಕ್ರಮ–ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಪುತ್ತೂರು ಎಪಿಯಂಸಿ ಅಧ್ಯಕ್ಷ ದಿನೇಶ್ ಮೆದು, ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.