ವಿಘ್ನವಿನಾಶಕ ಗಣೇಶನ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಮಂಗಳೂರು ನಗರದಲ್ಲಿ 90 ವರ್ಷಗಳಿಂದ ನಿರಂತರವಾಗಿ ಪರಿಸರ ಸ್ನೇಹಿ ಗಣೇಶನ ವಿಗ್ರಹ ತಯಾರಿಸುವ ಕಾಯಕದಲ್ಲಿ ಕುಟುಂಬವೊಂದು ನಿರತವಾಗಿದೆ. ಮಣ್ಣಗುಡ್ಡೆಯ ‘ಶ್ರೀ ಗಣೇಶ್’ನ ಎಂ.ಮೋಹನ್ ರಾವ್ 90 ವರ್ಷಗಳ ಹಿಂದೆ ಗಣಪನ ಮೂರ್ತಿ ತಯಾರಿಕೆ ಆರಂಭಿಸಿದ್ದರು. ನಾಲ್ಕನೇ ತಲೆಮಾರಿನವರಿಗೂ ಈ ಕಾಯಕ ಮುಂದುವರಿದಿದೆ. ಆವೆ ಮಣ್ಣಿನಿಂದ ತಯಾರಾಗುವ ಈ ಮೂರ್ತಿಗಳು ಭಕ್ತಿಯ ಜೊತೆಗೆ, ಪರಿಸರ ಸಂರಕ್ಷಣೆಯ ಪಾಠ ಹೇಳುತ್ತಿವೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.