ADVERTISEMENT

ಮಾದಕ ವ್ಯಸನ ಪಿಡುಗು ತೊಲಗಿಸಿ: ದಯಾನಂದ ಕತ್ತಲ್‌ಸಾರ್

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 14:26 IST
Last Updated 9 ಜೂನ್ 2024, 14:26 IST
ವಿಶ್ವತಂಬಾಕು ವಿರೋಧಿ ದಿನಾಚರಣೆಯನ್ನು ದಯಾನಂದ ಕತ್ತಲ್‌ಸಾರ್ ಉದ್ಘಾಟಿಸಿದರು
ವಿಶ್ವತಂಬಾಕು ವಿರೋಧಿ ದಿನಾಚರಣೆಯನ್ನು ದಯಾನಂದ ಕತ್ತಲ್‌ಸಾರ್ ಉದ್ಘಾಟಿಸಿದರು   

ಸುರತ್ಕಲ್: ದುಶ್ಚಟದ ಪ್ರಭಾವದಿಂದ ಹಲವು ಮಂದಿ ಅರಿವಿಲ್ಲದೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯಗೆ ಬಲಿಯಾಗುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಲು ಅದ್ಯತೆ ನೀಡಬೇಕಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಜಪೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ಚೇಳೈರುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಸುರತ್ಕಲ್ ಪೊಲೀಸ್ ಠಾಣೆಯ ಪಿಎಸ್‌ಐ ರಘನಾಯಕ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರ ಇದ್ದು ವಿದ್ಯಾಭ್ಯಾಸಕ್ಕೆ ಹೆಚ್ಚು ಕೊಡಬೇಕು ಎಂದರು.

ADVERTISEMENT

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ್ಕಿ ಜನಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಬೆಳ್ಳಾಯರು ಅಧ್ಯಕ್ಷತೆ ವಹಿಸಿದ್ದರು.

ಚೇಳೈರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಾನಂದ, ಉಪಾಧ್ಯಕ್ಷೆ ರೇಖಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲ್ಕಿ ವಲಯಾಧ್ಯಕ್ಷ ಪುಷ್ಷರಾಜ್ ಶೆಟ್ಟಿ ಮಧ್ಯ, ವಲಯದ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ಚೇಳೈರು ಒಕ್ಕೂಟದ ಉಪಾಧ್ಯಕ್ಷ ಕಿರಣ್ ಶೆಟ್ಟಿ ಕೆರೆಮನೆ, ಸೇವಾ ಪ್ರತಿನಿಧಿ ವಿದ್ಯಾ, ಮುಖ್ಯ ಶಿಕ್ಷಕಿ ತೆರೇಸಾ ವೇಗಸ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.