ಉಳ್ಳಾಲ: ಕುಂಪಲದ ಬಗಂಬಿಲ ಎಂಬಲ್ಲಿ ಮಹಿಳಾ ಪೊಲೀಸ್ ಕಾನ್ ಸ್ಟೆಬಲ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಿವೃತ್ತ ಯೋಧನೊಬ್ಬನನ್ನು ಮಂಗಳವಾರ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45) ಮಹಿಳಾ ಕಾನ್ಸ್ಟೆಬಲ್ ಗೆ ಕಿರುಕುಳ ನೀಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳಾ ಕಾನ್ಸ್ಟೆಬಲ್ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ನಿವೃತ್ತ ಯೋಧ ಪ್ರಶಾಂತ್, ಆಕೆ ಮೈಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ತಕ್ಷಣ ಬೊಬ್ಬಿಟ್ಟಾಗ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ನಿವೃತ್ತ ಯೋಧನನ್ನು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಗೊತ್ತಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿವೃತ್ತ ಯೋಧ ಪ್ರಶಾಂತ್ ವಿರುದ್ಧ ಹಲವರು ದೂರುಗಳು ದಾಖಲಾಗಿದ್ದು, ಕೆಲ ಪ್ರಕರಣಗಳು ವಿಚಾರಣೆ ಹಂತದಲ್ಲಿದೆ. ನೆರೆಮನೆಯವರಿಗೆ, ಊರಿನವರಿಗೆ ನಿತ್ಯ ಕುಡಿದು ಬಂದು ಕಿರುಕುಳ ನೀಡುವ ಈತನ ವಿರುದ್ಧ ಹಲವರು ದೂರು ನೀಡಿದ್ದರು. ಆತನ ವಿರುದ್ಧ ದೆಹಲಿ ಯೋಧರ ಅಸೋಸಿಯೇಷನ್ ನಲ್ಲಿಯೂ ಎರಡು ದೂರುಗಳು ವಿಚಾರಣಾ ಹಂತದಲ್ಲಿವೆ ಎಂದು ಮೂಲಗಳು ತಿಳಿಸಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.