ADVERTISEMENT

ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ಎಫ್‌ಡಿಪಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 6:15 IST
Last Updated 28 ಫೆಬ್ರುವರಿ 2024, 6:15 IST
ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಕಾರ್ಯಕ್ರಮ ಉದ್ಘಾಟಿಸಿದರು
ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಕಾರ್ಯಕ್ರಮ ಉದ್ಘಾಟಿಸಿದರು   

ಮುಡಿಪು: ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್‌ ವಿಜ್ಞಾನ ವಿಭಾಗದಲ್ಲಿ, ಎಐಸಿಟಿಇ- ಎಟಿಎಎಲ್‌ ಸಹಯೋಗದೊಂದಿಗೆ ‘ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್: ಇನೊವೇಷನ್ಸ್‌ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್’ ಕುರಿತ ಬೋಧಕರ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಸಂಯೋಜಕ, ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಬಿ.ಎಚ್.ಶೇಖರ್ ಮಾತನಾಡಿದರು.

ಮೈಸೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಎಚ್.ಎಸ್. ನಾಗೇಂದ್ರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು.

ADVERTISEMENT

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ಪಿ.ಎ.ಎಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಪ್ರೊ.ಶರ್ಮಿಳಾ ಕುಮಾರಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಕಾಶ್ ಎಂ. ವಂದಿಸಿದರು. ವಿಶ್ವವಿದ್ಯಾನಿಲಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಭಾರತಿ ಪಿಲಾರ್ ಕಾರ್ಯಕ್ರಮ ನಿರೂಪಿಸಿದರು.

ಎಲೆಕ್ಟ್ರಾನಿಕ್ಸ್‌ ವಿಭಾಗದ ಮುಖ್ಯಸ್ಥ ಪ್ರೊ.ಎ.ಎಂ.ಖಾನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.