ADVERTISEMENT

ಗಣೇಶೋತ್ಸವ ಉದ್ಘಾಟನೆ: ನಿವೃತ ಸೈನಿಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 14:01 IST
Last Updated 6 ಸೆಪ್ಟೆಂಬರ್ 2024, 14:01 IST
ಬೆಳ್ತಂಗಡಿ ಗುರು ನಾರಾಯಣ ಸಭಾ ಭವನದಲ್ಲಿ ನಡೆದ ಸಾರ್ವಜನಿಕ ಗೌರಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು
ಬೆಳ್ತಂಗಡಿ ಗುರು ನಾರಾಯಣ ಸಭಾ ಭವನದಲ್ಲಿ ನಡೆದ ಸಾರ್ವಜನಿಕ ಗೌರಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು   

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಸಾರ್ವಜನಿಕ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಸಾರ್ವಜನಿಕ ಗೌರಿ ಗಣೇಶೋತ್ಸವವು ಶುಕ್ರವಾರ ಆರಂಭಗೊಂಡಿದ್ದು, ಸೆ.8ರವರೆಗೆ ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ನಡೆಯಲಿದೆ.

ಶುಕ್ರವಾರ ಬೆಳಿಗ್ಗೆ ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಗಣಹೋಮ, ಅಪ್ಪದ ಪೂಜೆ, ಭಜನಾ ಕಾರ್ಯಕ್ರಮವು ನಡೆಯಿತು.

ಭಾರತೀಯ ಭೂಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂ.ವಿ.ಭಟ್ ಕಾರ್ಯಕ್ರಮ ಉದ್ಘಾಟಿಸಿದರು.

ADVERTISEMENT

ಗೌರಿ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪ್ರಮುಖರಾದ ಚಂದ್ರಾವತಿ, ಮಂಜುನಾಥ ಪೈ, ಕೇಶವ ಗೌಡ ಬೆಳಾಲು ಭಾಗವಹಿಸಿದ್ದರು.

ತಾಲ್ಲೂಕಿನ ನಿವೃತ್ತ ಸೈನಿಕರಿಗೆ, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ, ಸಾಮಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಪೂಜಿಸಲ್ಪಡುತ್ತಿರುವ ಗೌರಿ ಗಣೇಶ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.