ADVERTISEMENT

ಮೂಡುಬಿದಿರೆಯಲ್ಲಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಇಂದು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2024, 5:05 IST
Last Updated 20 ಫೆಬ್ರುವರಿ 2024, 5:05 IST

ಮೂಡುಬಿದಿರೆ: ಇಲ್ಲಿನ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ರಂಗಕರ್ಮಿ ಶ್ರೀಪತಿ ಮಂಜನಬೈಲು ಅವರ ಸರ್ವಾಧ್ಯಕ್ಷತೆಯಲ್ಲಿ ಫೆ.20ರಂದು (ಮಂಗಳವಾರ) ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಬೆಳಿಗ್ಗೆ 9ಕ್ಕೆ ತಹಶೀಲ್ದಾರ್ ಮುಕುಲ್ ಜೈನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಸತ್ತಿನ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಪರಿಷತ್ತು ಧ್ವಜಾರೋಹಣ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಎಸ್.ಕೆ.ಎಫ್ ಅಧ್ಯಕ್ಷ ರಾಮಕೃಷ್ಣ ಆಚಾರ್ ಪ್ರದರ್ಶನ ಮತ್ತು ಮಳಿಗೆಗಳಿಗೆಗೆ ಚಾಲನೆ ನೀಡುವರು. ಬಳಿಕ ಶಾಸಕ ಉಮಾನಾಥ ಕೋಟ್ಯಾನ್ ಸಮ್ಮೇಳನವನ್ನು ಉದ್ಘಾಟಿಸುವರು. ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಅಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ್ ಭಟ್, ಮಾಜಿ ಸಚಿವ ಅಭಯಚಂದ್ರ, ಚೌಟರ ಅರಮನೆಯ ಕುಲದೀಪ್ ಎಂ., ಎಂಸಿಎಸ್ ಸೊಸೈಟಿ ಅಧ್ಯಕ್ಷ ಬಾಹುಬಲಿ ಪ್ರಸಾದ್, ಎಕ್ಸಲೆಂಟ್ ಕಾಲೇಜಿನ ಯುವರಾಜ್ ಜೈನ್, ತಾಲ್ಲೂಕು ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಭಾಗವಹಿಸುವರು.

ADVERTISEMENT

ವಿಶೇಷ ಉಪನ್ಯಾಸ, ವಿಚಾರ ಮಂಡನೆ, ಜನಪದ ಹಾಡುಗಳು ಗಾಯನ ನಡೆಯಲಿದ್ದು, ಸಂಜೆ 4ಕ್ಕೆ ಸಾಹಿತಿ ನರೆಂದ್ರ ರೈ ದೇರ್ಲ ಸಮಾರೋಪ ಭಾಷಣ ಮಾಡಲಿದ್ದಾರೆ. ಸಾಧಕರಾದ ಅಬ್ದುಲ್ ಹಮೀದ್ ಪಕಲಡ್ಕ, ಧನಂಜಯ ಮೂಡುಬಿದಿರೆ, ಶಾಂತಾರಾಮ ಕುಡ್ವ, ಪುಷ್ಪ ಪರವ, ಪೌಸ್ತಿನ್ ಸಿಕ್ವೇರ ಅವರನ್ನು ಸನ್ಮಾನಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.