ADVERTISEMENT

ಬಂಟ್ವಾಳ | ಸಾಮರಸ್ಯದ ಸಮಾಜ ನಿರ್ಮಾಣವಾಗಲಿ: ವಿನಯ ಗುರೂಜಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 6:21 IST
Last Updated 1 ಫೆಬ್ರುವರಿ 2024, 6:21 IST
<div class="paragraphs"><p>ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ರಾಮನಗರದಲ್ಲಿ ಶ್ರೀರಾಮ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವಿದ್ಯಾಗಣಪತಿ ಗುಡಿಗೆ ಶಿಲಾನ್ಯಾಸ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಗೌರಿಗದ್ದೆಯ ಅವಧೂತ ವಿನಯ ಗುರೂಜಿ&nbsp; ಮಾತನಾಡಿದರು.&nbsp;</p></div>

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ರಾಮನಗರದಲ್ಲಿ ಶ್ರೀರಾಮ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವಿದ್ಯಾಗಣಪತಿ ಗುಡಿಗೆ ಶಿಲಾನ್ಯಾಸ ಪ್ರಯುಕ್ತ ಬುಧವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಗೌರಿಗದ್ದೆಯ ಅವಧೂತ ವಿನಯ ಗುರೂಜಿ  ಮಾತನಾಡಿದರು. 

   

ಬಂಟ್ವಾಳ: ‘ಎಲ್ಲ ಧಾರ್ಮಿಕ ಶ್ರದ್ಧಾಕೇಂದ್ರಗಳು ಅಯೋಧ್ಯೆಯಂತೆ ರೂಪುಗೊಂಡು ಕಂಗೊಳಿಸಬೇಕು. ಆ ಮೂಲಕ ಸುಸಂಸ್ಕೃತ ಮತ್ತು ಸುಶಿಕ್ಷಿತ ಹಾಗೂ ಸಾಮರಸ್ಯದ ಸಮಾಜ ನಿರ್ಮಾಣವಾಗಬೇಕು’ ಎಂದು ಗೌರಿಗದ್ದೆಯ ಅವಧೂತ ವಿನಯ ಗುರೂಜಿ ಹೇಳಿದರು.

ಇಲ್ಲಿನ ಕಲ್ಲಡ್ಕ ಶ್ರೀರಾಮ ಮಂದಿರ ರಾಮನಗರದಲ್ಲಿ  ಶ್ರೀ ವಿದ್ಯಾಗಣಪತಿ ದೇವರ ಗುಡಿಗೆ ಬುಧವಾರ ಶಿಲಾನ್ಯಾಸ ನೆರವೇರಿಸಿದ ಅವರು ಬಳಿಕ ನಡೆದ ಧಾರ್ಮಿ ಸಭೆಯಲ್ಲಿ ಆಶೀರ್ವಚನ ನೀಡಿದರು.

ADVERTISEMENT

‘ಕರಾವಳಿಯಲ್ಲಿ ದೈವಾರಾಧನಾ ಪದ್ಧತಿಯು ಕೌಟುಂಬಿಕ ಜೀವನ ಪದ್ಧತಿಯನ್ನು ಉಳಿಸಿಕೊಂಡಿದೆ’ ಎಂದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರಿನ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಮುಂಬೈ ಉದ್ಯಮಿ ಸಂತೋಷ ಜಿ.ಶೆಟ್ಟಿ ದಲಂಬಿಲ, ಅನಂತ ಮೂರ್ತಿ ಶುಭ ಹಾರೈಸಿದರು.

ಕಶೆಕೋಡಿ ಸೂರ್ಯನಾರಾಯಣ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು.

ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಶಂಬು ಶೆಟ್ಟಿ, ಟಿ.ಜಿ.ರಾಜಾರಾಮ ಭಟ್, ಬಿ.ರಘುನಾಥ ಸೋಮಯಾಜಿ, ಬಿ.ನಾರಾಯಣ ಸೋಮಯಾಜಿ, ಕ್ಯಾ. ಬೃಜೇಶ್ ಚೌಟ, ಡಾ. ಕೆ.ಕಮಲಾ ಪ್ರಭಾಕರ ಭಟ್, ಪದಾಧಿಕಾರಿಗಳಾದ ನಾಗೇಶ ಕಲ್ಲಡ್ಕ, ಚೆನ್ನಪ್ಪ ಕೋಟ್ಯಾನ್, ಕೆ.ಕೃಷ್ಣಪ್ಪ, ಸುಜಿತ್ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.