ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆ ಕರ್ತವ್ಯ ನಿರ್ವಹಿಸಲು ಮೊದಲ ಹಂತದಲ್ಲಿ ನಾಲ್ಕು ಸಿಆರ್‌ಪಿಎಫ್ ತುಕಡಿಗಳು ಬಂದಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಮಟೆ ವಿಕ್ರಮ್ ತಿಳಿಸಿದ್ದಾರೆ.
ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದು ತುಕಡಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇನ್ನಷ್ಟು ತುಕಡಿಗಳು ಜಿಲ್ಲೆಗೆ ಬರಲಿವೆ. ಈ ತುಕಡಿಗಳು ಚೆಕ್‌ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸರಿಗೆ ಸಹಾಯ ಹಾಗೂ ಚುನಾವಣೆಗೆ ಸಂಬಂಧಿಸಿದ ಇತರ ಕರ್ತವ್ಯಗಳನ್ನು ನಿರ್ವಹಿಸಲಿವೆ ಎಂದು ಅವರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.