ADVERTISEMENT

ಆವರಣಗೋಡೆ ಕುಸಿದು ನಾಲ್ವರ ಸಾವು: ಸಂತ್ರಸ್ತ ಕುಟುಂಬಕ್ಕೆ ಪರಿಹಾರ; ಖಾದರ್‌

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 6:23 IST
Last Updated 26 ಜೂನ್ 2024, 6:23 IST
<div class="paragraphs"><p>ಉಳ್ಳಾಲ ತಾಲ್ಲೂಕಿನ ಕುತ್ತಾರ್ ಮದನಿ ನಗರದಲ್ಲಿ ಮನೆಯ ಮೇಲೆ ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.&nbsp;ಜೊತೆಯಲ್ಲಿದ್ದರು</p><p></p></div>

ಉಳ್ಳಾಲ ತಾಲ್ಲೂಕಿನ ಕುತ್ತಾರ್ ಮದನಿ ನಗರದಲ್ಲಿ ಮನೆಯ ಮೇಲೆ ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಜೊತೆಯಲ್ಲಿದ್ದರು

   

ಉಳ್ಳಾಲ: ತಾಲ್ಲೂಕಿನ ಕುತ್ತಾರು ಮದನಿನಗರದಲ್ಲಿ ಭಾರಿ ಮಳೆಗೆ ಕುಸಿದ ಆವರಣ ಗೋಡೆಯಡಿ ಸಿಲುಕಿ ನಾಲ್ವರು ಮೃತಪಟ್ಟಿದ್ದು, ಸಂತ್ತಸ್ತ ಕುಟುಂಬಕ್ಕೆ ಪರಿಹಾರ ನೀಡಲು ಕ್ರಮ ವಹಿಸುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಘಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು. 'ಬಂಧುಗಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಕ್ಕೆ ಹಾಗೂ ಆವರಣ ಗೋಡೆ ಬಿದ್ದಿದ್ದಕ್ಕೆ ಪರಿಹಾರ ನೀಡಲು ಅವಕಾಶವಿದೆ. ಶಾಲೆಗೆ ಹೋಗುವ ಮಕ್ಕಳು ಮೃತಪಟ್ಡಿದ್ದಕ್ಕೆ ಪ್ರತ್ಯೇಕವಾಗಿ ತುರ್ತು ಸಂದರ್ಭದಲ್ಲಿ ಪರಿಹಾರ ನೀಡಲಾಗುತ್ತದೆ. ನಿಯಮಗಳಬ್ನು ನೋಡಿಕೊಂಡು ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುತ್ತದೆ. ಜಿಲ್ಲಾಧಿಕಾರಿ ಯವರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ' ಎಂದರು.

'ನಿಯಮಮೀರಿ ಆವರಣಗೋಡೆ ನಿರ್ಮಿಸಲಾಗಿದ್ದರೂ, ಸಂತ್ರಸ್ತರಿಗೆ ಹೇಗೆ ನೆರವಾಗಬಹುದು ಎಂಬ ಬಗ್ಗೆ ಜನಪ್ರತಿಗಳು ಹಾಗೂ ಅಧಿಕಾರಿಗಳು ಚರ್ಚಿಸಿ ಕ್ರಮವಹಿಸುತ್ತೇವೆ' ಎಂದರು..

ಮತ್ತೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಅಧೀಕಾರಿಗಳಿಗೆ ಖಾದರ್ ಸೂಚಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.