ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರನ್ನು ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿದ ವ್ಯಕ್ತಿಯೊಬ್ಬ ₹ 10 ಲಕ್ಷವನ್ನು ತನ್ನ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾನೆ.
ಕಳೆದ ವರ್ಷ ಡಿ.15ರಂದು ಟೆಲಿಗ್ರಾಂ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಬಗ್ಗೆ ತಿಳಿಸಿದ್ದ. ಆತ ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ₹ 10 ಲಕ್ಷವನ್ನು ತನ್ನ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿಕೊಂಡು ಬಳಿಕ ವಂಚಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.