ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು ₹343.74 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟ್‌ನಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ವಿಸ್ತರಣೆಯಾಗಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಹೇಳಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್ ಅನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.