ಮಂಗಳೂರು: ಕಳ್ಳಸಾಗಣೆಯಾದ 964 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ಇದರ ಬೆಲೆ ₹49.74 ಲಕ್ಷ ಎಂದು ಅಂದಾಜಿಸಲಾಗಿದೆ.
ದುಬೈನಿಂದ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರು ಅಂಡಾಕಾರದ ನಾಲ್ಕು ಸಾಮಗ್ರಿಗಳ ಒಳಗೆ ಚಿನ್ನದ ಹುಡಿಯನ್ಬು ಹುದುಗಿಸಿ ಗುದನಾಳದಲ್ಲಿ ಇಟ್ಟುಕೊಂಡಿದ್ದರು. ಅದನ್ನು ಹೊರತೆಗೆದು ಶೋಧಿಸಿದಾಗ 964 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.