ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಇದೇ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನ. 7 ಸಂಜೆ 5ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ನಾಮಪತ್ರಗಳ ಪರಿಶೀಲನೆ ನ.8ರಂದು ನಡೆಯಲಿದೆ, ಉಮೇದುವಾರಿಕೆ ಹಿಂಪಡೆಯಲು ನ.11 ಕೊನೇಯ ದಿನ. ನಗರದ ಮಿನಿ ವಿಧಾನಸೌಧದ ಬಳಿಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿನ ಮತಗಟ್ಟೆಯಲ್ಲಿ ನ.16 ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅಂದೇ ಮತಗಳ ಎಣಿಕೆ ನಡೆಯಲಿದೆ ಎಂದು ಸಂಘದ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.