ADVERTISEMENT

ಶುದ್ಧ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಗುರುದೇವಾನಂದ ಸ್ವಾಮೀಜಿ

ಒಡಿಯೂರಿನಲ್ಲಿ ವೈದ್ಯಕೀಯ ಸೇವಾ ಶಿಬಿರ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 14:08 IST
Last Updated 14 ಜುಲೈ 2024, 14:08 IST
ರಕ್ತದಾನ ಶಿಬಿರ ನಡೆಯಿತು
ರಕ್ತದಾನ ಶಿಬಿರ ನಡೆಯಿತು   

ವಿಟ್ಲ: ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ರಕ್ತದಾನದ ಮೂಲಕ ಜನರ ಪ್ರಾಣ ಉಳಿಸಬಹುದು. ಅಗತ್ಯ ಕಂಡುಕೊಂಡು ಪೂರೈಕೆ ಮಾಡಬೇಕು ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಒಡಿಯೂರು ಸ್ವಾಮೀಜಿ ಜನ್ಮದಿನೋತ್ಸವ - ಸೇವಾ ಸಂಭ್ರಮ ಗ್ರಾಮೋತ್ಸವದ ಪ್ರಯುಕ್ತ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಒನ್‌ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಷನ್ ಬೆಂಗಳೂರು, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ವೆನ್ಲಾಕ್‌ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಆಯುಷ್ ಇಲಾಖೆ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟಬಲ್ ಆಸ್ಪತ್ರೆ, ಎ.ಬಿ.ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯ, ದೇರಳಕಟ್ಟೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕನ್ಯಾನ ಸಹಯೋಗದಲ್ಲಿ ನಡೆದ ವೈದ್ಯಕೀಯ ಸೇವಾ ಶಿಬಿರ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಹಿತ - ಮಿತ, ಋತುಗಳಿಗೆ ಸರಿಯಾಗಿ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯ ಕಾಪಾಡಬಹುದು ಎಂದು ಹೇಳಿದರು.

ADVERTISEMENT

ಸಾಧ್ವಿ ಮಾತಾನಂದಮಯಿ ಸಾನ್ನಿಧ್ಯ ವಹಿಸಿದ್ದರು. ಕ್ಷೇತ್ರದಲ್ಲಿ ಆ.8ರಂದು ನಡೆಯುವ ಸ್ವಾಮೀಜಿ ಅವರ ಜನ್ಮದಿನೋತ್ಸವ ಗ್ರಾಮೋತ್ಸವ, ಗುರುವಂದನ - ಸೇವಾ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.

ದೇರಳಕಟ್ಟೆ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಹಿರಿಯ ಉಪನ್ಯಾಸಕಿ ಡಾ.ತಾರಾಚಂದ್ರನ್, ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ರಕ್ತ ನಿಧಿ ವಿಭಾಗ ಮುಖ್ಯಸ್ಥ ಡಾ.ಶರತ್ ಕುಮಾರ್ ಜೆ.ರಾವ್, ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೆದ್ಯಾಧಿಕಾರಿ ಡಾ.ಕೃಷ್ಣಮೂರ್ತಿ ಡಿ., ಕೆ.ಎಸ್. ಹೆಗ್ಡೆ ಚಾರಿಟಬಲ್‌ ಆಸ್ಪತ್ರೆಯ ಮಾರುಕಟ್ಟೆ ಅಧಿಕಾರಿ ಜೈಸನ್, ಬೆಂಗಳೂರು ಒನ್‌ಸೈಟ್ ಎಸ್ಸಿಲೋರ್ ಲಕ್ಸೋಟಿಕ್ ಫೌಂಡೇಷನ್ ಮುಖ್ಯ ವ್ಯವಸ್ಥಾಪಕ ಧರ್ಮಪ್ರಸಾದ್ ರೈ, ಮಂಗಳೂರು ಪ್ರಸಾದ್ ನೇತ್ರಾಲಯದ ಡಾ.ಶ್ರೀಕೀರ್ತಿ, ಮಂಗಳೂರು ಆಯುಷ್ ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ.ಹೇಮಾವಾಣಿ, ಡಾ.ಕೃಷ್ಣ ಪ್ರಸಾದ್, ಒಡಿಯೂರು ಶ್ರೀವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ಎ.ಸುರೇಶ್ ರೈ, ಒಡಿಯೂರು ಸ್ವಾಮೀಜಿ ಜನ್ಮದಿನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಿಂಗಪ್ಪ ಗೌಡ ಪನೆಯಡ್ಕ, ಕೋಶಾಧಿಕಾರಿ ಎ.ಅಶೋಕ್ ಕುಮಾರ್ ಬಿಜೈ, ಒಡಿಯೂರು ಶ್ರೀಗ್ರಾಮವಿಕಾಸ ಯೋಜನೆ ಉಡುಪಿ ವಲಯ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಭಾಗವಹಿಸಿದ್ದರು.

ಜನ್ಮದಿನೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ ಮಾತೇಶ್ ಭಂಡಾರಿ ಸ್ವಾಗತಿಸಿದರು. ಯೋಜನೆಯ ಮೇಲ್ವಿಚಾರಕಿ ಲೀಲಾ ವಂದಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಸುಮಾರು 673 ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.