ADVERTISEMENT

ಅನಧಿಕೃತ ಕ್ಲಿನಿಕ್, ಲ್ಯಾಬ್‌ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳ ದಾಳಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 3:06 IST
Last Updated 7 ಡಿಸೆಂಬರ್ 2023, 3:06 IST

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ಮೇಲೆ ಬುಧವಾರ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಹಾಕಿದ್ದಾರೆ.

ಕೆ.ಪಿ.ಎಂ.ಇ.ಎ ಕಾಯ್ದೆ-2017ರ ಅಡಿಯಲ್ಲಿ ನೋಂದಣಿಯಾಗದೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ, ಕ್ಲಿನಿಕ್‌ಗಳ ಪ್ರಯೋಗಾಲಯಗಳ ಮೇಲೆ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲಿಸಿದರು. ಮೂಡುಶೆಡ್ಡೆ, ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್, ಪ್ರಯೋಗಾಲಯ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.

ನೋಂದಣಿ ಆಗದಿರುವ ಕ್ಲಿನಿಕ್‌ಗಳು, ಲ್ಯಾಬ್‌ಗಳು, ನೋಂದಣಿ ನವೀಕರಣಕ್ಕೆ ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದ ಒಳಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಅವಧಿ ಮೀರಿದಲ್ಲಿ  ಕೆ.ಪಿ.ಎಂ.ಇ ಕಾಯ್ದೆ ಅಡಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ‍‍ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.