ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಮಂಗಳವಾರ (ಜುಲೈ 16) ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮಂಗಳವಾರವೂ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಆಗಿರುವುದರಿಂದ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ದಿನವಿಡೀ ಉತ್ತಮ ಮಳೆ ಸುರಿಯಿತು. ಭಾನುವಾರ ರಾತ್ರಿಯಿಂದಲೇ ಧಾರಾಕಾರ ಮಳೆಯಾಗಿತ್ತು. ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಭಾರಿ ಗಾಳಿಮಳೆಗೆ ಕೆಲ ಶಾಲೆಗಳ ಹೆಂಚುಗಳು ಹಾರಿಹೋಗಿರುವ ಕುರಿತು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.