ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಪಶ್ಚಿಮ ಘಟ್ಟ ಪ್ರದೇಶ ಹಾಗೂ ಕುಮಾರಪರ್ವತದ ಪ್ರದೇಶಗಳಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಭಾರಿ ಮಳೆಯಾಗಿದ್ದು ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ.
ಇಲ್ಲಿನ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ಕಿಂಡಿ ಅಣೆಕಟ್ಟು ಸಂಪೂರ್ಣ ಜಲಾವೃತವಾಗಿದೆ. ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದ್ದು, ಅವರು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ನದಿ ತೀರದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಕುಮಾರಧಾರಾ ನದಿಯ ಉಪನದಿ ದರ್ಪಣತೀರ್ಥ ಕೂಡ ಮೈತುಂಬಿ ಹರಿಯುತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.