ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಸೋಮವಾರ ಬೆಳಿಗ್ಗೆ 16 ಚಕ್ರದ ಲಾರಿ ತಿರುವು ತೆಗೆದುಕೊಳ್ಳಲು ಆಗದೆ, ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡಿದ್ದು, ಇದರಿಂದ ವಾಹನಗಳು ಮುಂದೆ ಸಾಗಲಾಗದೆ ದಟ್ಟಣೆ ಉಂಟಾಗಿತ್ತು. ಲಾರಿ ಚಾಲಕನ ಮಾಡಿದ ತಪ್ಪಿನಿಂದ ವಾಹನ ಸವಾರರು ಪರದಾಡುವಂತಾಯಿತು.
ಪೋಲಿಸರು, ಚಾರ್ಮಾಡಿ ಹಸನಬ್ಬರ ತಂಡ ಹಾಗೂ ಇತರರು ಲಾರಿಯನ್ನು ಕ್ರೇನ್ ಮೂಲಕ ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಚಾರ್ಮಾಡಿ ಘಾಟಿಯಲ್ಲಿ ಘನ ವಾಹನಗಳ ಪ್ರವೇಶಕ್ಕೆ ನಿಷೇಧ ಇದೆ. ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಸಿಮೆಂಟ್ ಸಾಗಿಸುತ್ತಿದ್ದ ಈ ಲಾರಿ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಘಾಟಿ ಮಾರ್ಗವಾಗಿ ಬಂದಿದೆ ಎಂದು ಸ್ಥಳೀಯರು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.