ADVERTISEMENT

ಕಾರ್ಯಕರ್ತರ ವ್ಯಕ್ತಿತ್ವಕ್ಕೆ ಧಕ್ಕೆಯಾಗಂತೆ ಕೆಲಸ ಮಾಡುವೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 7:54 IST
Last Updated 20 ಅಕ್ಟೋಬರ್ 2024, 7:54 IST
ಮೂಡುಬಿದಿರೆಯಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಕಿಶೋರ್ ಕುಮಾರ್ ಉದ್ಘಾಟಿಸಿದರು
ಮೂಡುಬಿದಿರೆಯಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಕಿಶೋರ್ ಕುಮಾರ್ ಉದ್ಘಾಟಿಸಿದರು   

ಮೂಡುಬಿದಿರೆ: ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ ಪಕ್ಷ ಮತ್ತು ಕಾರ್ಯಕರ್ತರ ವ್ಯಕ್ತಿತ್ವಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಾಜಕಾರಣ ನಡೆಸುವುದಾಗಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.

ವಿಧಾನ ಪರಿಷತ್ ಉಪ ಚುನಾವಣೆ ಸಂಬಂಧ ಇಲ್ಲಿನ ಕಾಮಧೇನು ಸಭಾಭವನದಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಜಾತಿ ರಾಜಕಾರಣದ ವೈಭವೀಕರಣದ ನಡುವೆಯೂ ಬಿಜೆಪಿ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಎಲ್ಲ ಜನಪ್ರತಿನಿಧಿಗಳು ಪಕ್ಷದ ಅಭ್ಯರ್ಥಿಯ ಗೆಲುವಿಗೆ ನೆರವಾಗಬೇಕು ಎಂದರು.

ADVERTISEMENT

ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ ಪ್ರಭಾರಿ ಜಯಂತ ಕೋಟ್ಯಾನ್, ಜಿಲ್ಲಾ ಘಟಕ ಉಪಾಧ್ಯಕ್ಷರಾದ ಶಾಂತಿಪ್ರಸಾದ್ ಹೆಗ್ಡೆ, ಸುನಿಲ್ ಆಳ್ವ, ಮಂಡಲ ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಚುನಾವಣಾ ಜಿಲ್ಲಾ ಸಹಸಂಚಾಲಕ ರಾಕೇಶ್ ರೈ, ಉಸ್ತುವಾರಿ ಸಹ ಪ್ರಭಾರಿ ಹರೀಶ್ ಮೂಡುಶೆಡ್ಡೆ, ಯತೀಶ್ ಅರ್ವ, ಸತೀಶ್ ಅಂಚನ್, ಲಕ್ಷ್ಮೀ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.