ADVERTISEMENT

ಮಂಗಳೂರು: ವಿಮಾನ ಪ್ರಯಾಣಿಕರ ಸಂಖ್ಯೆ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 0:08 IST
Last Updated 26 ಅಕ್ಟೋಬರ್ 2024, 0:08 IST
   

ಮಂಗಳೂರು: ಇಲ್ಲಿನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮತ್ತು ವಿಮಾನ ಸಂಚಾರದಲ್ಲಿ ಭಾರಿ ಏರಿಕೆ ಆಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ವಿಮಾನ ನಿಲ್ದಾಣವು ಪ್ಯಾಕ್ಸ್ ಚಲನೆಯಲ್ಲಿ ಶೇ 18.5 ಬೆಳವಣಿಗೆ ದಾಖಲಿಸಿದೆ.

ಮೊದಲ ತ್ರೈಮಾಸಿಕದಲ್ಲಿ ಏರ್ ಟ್ರಾಫಿಕ್ ಮೂವ್‌ಮೆಂಟ್‌ (ಎಟಿಎಂ) ಶೇ 18.81ರಷ್ಟು ಏರಿಕೆ ಆಗಿತ್ತು. ಎರಡನೇ ತ್ರೈಮಾಸಿಕದಲ್ಲಿ ಶೇ 16.45ರಷ್ಟು ಏರಿಕೆ ಆಗಿದೆ. ಎರಡನೇ ತ್ರೈಮಾಸಿಕದಲ್ಲಿ ಅಂತರರಾಷ್ಟ್ರೀಯ ಕಾರ್ಯಾಚರಣೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಎಟಿಎಂಗಳು ಶೇ 17.34ರಷ್ಟು ಬೆಳೆದಿವೆ.

ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಮಂಗಳೂರು ವಿಮಾನ ನಿಲ್ದಾಣವು 11.21 ಲಕ್ಷ ಪ್ರಯಾಣಿಕರನ್ನು ನಿರ್ವಹಿಸಿದ್ದು, ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ 9.46 ಲಕ್ಷ ಪ್ರಯಾಣಿಕರನ್ನು ನಿರ್ವಹಿಸಿತ್ತು.

ADVERTISEMENT

2024ರ ಆಗಸ್ಟ್‌ 15ರಂದು 7,402 ಪ್ರಯಾಣಿಕರನ್ನು ನಿರ್ವಹಿಸಿದೆ.

ದೇಶೀಯ ಪ್ರಯಾಣಿಕರ ಸಂಖ್ಯೆ ಶೇ 25ರಷ್ಟು ಹೆಚ್ಚಾಗಿದೆ. ಮಂಗಳೂರು– ಬೆಂಗಳೂರು ಮತ್ತು ಮಂಗಳೂರು– ಮುಂಬೈ  ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.