ಬಂಟ್ವಾಳ: ಇಲ್ಲಿನ ತುಂಬೆ ಮತ್ತು ಅಮ್ಮುಂಜೆ ಗ್ರಾಮ ಸೇರಿದಂತೆ ಪುರಸಭೆ ವ್ಯಾಪ್ತಿಯ ಗೂಡಿನ ಬಳಿ, ವಿಟ್ಲ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂ ಕುಸಿತಕ್ಕೀಡಾದ ಸ್ಥಳಗಳಿಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯದ ಇಬ್ಬರು ವಿಜ್ಞಾನಿಗಳು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲು ಮೂರು ದಿನಗಳಿಂದ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಹಶೀಲ್ದಾರ್ ಅರ್ಚನಾ ಭಟ್ ತಿಳಿಸಿದರು.
ಜಿಲ್ಲಾ ವಿಪತ್ತು ಪ್ರಾಧಿಕಾರದ ತಾಂತ್ರಿಕ ಸಲಹೆಗಾರ ವಿಜಯ್ ಕುಮಾರ್, ಹಿರಿಯ ಭೂ ವಿಜ್ಞಾನಿಗಳಾದ ಸೆಂಥಿಲ್ ಕುಮಾರ್, ಸೋವೇಶ್,
ಕಿರಿಯ ಎಂಜಿನಿಯರ್ ಯಶವಂತ, ಕಂದಾಯ ನಿರೀಕ್ಷಕರಾದ ವಿಜಯ್, ಜನಾರ್ದನ, ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ, ಕಂದಾಯ ಇಲಾಖೆ ಸಿಬ್ಬಂದಿ ಸದಾಶಿವ ಕೈಕಂಬ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.